ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಜೆಡಿಎಸ್ ನ ಮಹಮ್ಮದ್ ಅಶ್ರಫ್ ಕಲ್ಲೇಗ ಹಾಗೂ ಎಸ್ಡಿಪಿಐಯಿಂದ ನಾಮಪತ್ರ ಸಲ್ಲಿಸಿದ ಪಿ.ಇಬ್ರಾಹಿಂ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.
ಮೇ 10ರಂದು ನಡೆಯುವ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಒಟ್ಟು 10 ಮಂದಿ ನಾಮಪತ್ರ ಸಲ್ಲಿಸಿದ್ದರು. ಇದರಲ್ಲಿ ಇಬ್ಬರು ಚುನಾವಣೆಯಿಂದ ಹಿಂದೆ ಸರಿದಂತಾಗಿದೆ.
ಏ. 24ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದ್ದು, ಇಬ್ಬರು ಅಭ್ಯರ್ಥಿಗಳು ಸೋಮವಾರ ಖುದ್ದು ಚುನಾವಣಾಧಿಕಾರಿ ಕಚೇರಿಗೆ ಹಾಜರಾಗಿ ಉಮೇದುವಾರಿಕೆ ವಾಪಾಸು ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.