ತೃಶೂರ್ : ಎಂಟು ವರ್ಷದ ಬಾಲಕಿ ಮೊಬೈಲ್ ಫೋನ್ ಸ್ಫೋಟಗೊಂಡು ಮೃತಪಟ್ಟಿರುವ ದಾರುಣ ಘಟನೆ ಕೇರಳದಲ್ಲಿ ಸಂಭವಿಸಿದೆ. ಮೂರನೇ ತರಗತಿ ಬಾಲಕಿ ಆದಿತ್ಯಶ್ರೀ ರಾತ್ರಿ ತಾಯಿಯ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದಾಗ ಅದು ಸ್ಫೋಟಗೊಂಡಿದೆ. ಮುಖ ಮತ್ತು ಕೈಗೆ ಗಂಭೀರ ಸ್ವರೂಪದ ಸುಟ್ಟ ಗಾಯವಾಗಿದ್ದ ಬಾಲಕಿಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯಿದರೂ ಪ್ರಯೋಜನವಾಗಲಿಲ್ಲ. ತಶೂರು ಸಮೀಪದ ತಿರುವಿಲಾಮಲದ ಪಟ್ಟಿಪರಂಬು ಎಂಬಲ್ಲಿ ಈ ಘಟನೆ ಸಂಭವಿಸಿದೆ. ವಿಧಿವಿಜ್ಞಾನ ತಜ್ಞರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಪೋಟ
