ಮುಖಂಡರ ಮನೆ, ಕಚೇರಿ ಮತ್ತಿತರ ಸಂಸ್ಥಾಪನೆ ಶೋಧ
ದೆಹಲಿ : ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಾಯಕರಿಗೆ ಸೇರಿದ ಮನೆ ಮತ್ತಿತರ ಸಂಸ್ಥಾಪನೆಗಳ ಮೇಲಿನ ದಾಳಿ ಕಾರ್ಯಾಚರಣೆ ಮುಂದುವರಿದಿದೆ. ಇಂದು ಬೆಳ್ಳಂಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನಾಲ್ಕು ರಾಜ್ಯಗಳಲ್ಲಿ ಬೃಹತ್ ಮಟ್ಟದ ಕಾರ್ಯಾಚರಣೆ ಪ್ರಾರಂಭಿಸಿದೆ.
ಬಿಹಾರ, ಉತ್ತರ ಪ್ರದೇಶ, ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ನೂರಾರು ಎನ್ಐಎ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಸಲಾಗುತ್ತಿದೆ.