ದೆಹಲಿ : ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು ರದ್ದುಪಡಿಸಿರುವ ಕರ್ನಾಟಕ ಸರ್ಕಾರದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರವನ್ನು ಸುಪ್ರೀಂಕೋರ್ಟ್ ಮೇ 9 ಕ್ಕೆ ಮುಂದೂಡಿದೆ. ಇದರಿಂದ ಬಸವರಾಜ ಬೊಮ್ಮಾಯಿ ಅವರ ಸಂಪುಟದ ನಿರ್ಧಾರ ಜಾರಿಗೆ ಬಿದ್ದಿರುವ ಅಂಕುಶ ಮುಂದುವರೆದಿದೆ.
ಮುಸ್ಲಿಮರಿಗೆ ಒಬಿಸಿ ವರ್ಗದಲ್ಲಿ ನೀಡಲಾಗುತ್ತಿದ್ದ ಶೇ 4ರ ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಂಗಳವಾರ ಮುಂದುವರೆಸಿತು.
ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ದ್ವಿಸದಸ್ಯ ಪೀಠಕ್ಕೆ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ಅವರು ಪಕರಣವನ್ನು ಮುಂದಿನ ವಾರಕ್ಕೆ ಮುಂದೂಡಬಹುದೇ ಎಂದು ಮನವಿ ಮಾಡಿದರು. ಹಾಗೆಯೇ ಈ ನಿರ್ಧಾರದ ಅಡಿ ಯಾವುದೇ ಪ್ರವೇಶಾತಿ ಅಥವಾ ನೇಮಕಾತಿ ನಡೆಸುವುದಿಲ್ಲ ಎಂದು ಈ ಹಿಂದೆ ನೀಡಿದ್ದ ಆಶ್ವಾಸನೆಯನ್ನು ಮುಂದುವರಿಸುವುದಾಗಿ ಕೋರ್ಟ್‌ಗೆ ತಿಳಿಸಿದರು.