ತಿರುಪತಿ : ತಿರುಮಲ ತಿರುಪತಿ ದೇವಸ್ಥಾನ (TTD) ಇಂದು ಬೆಳಿಗ್ಗೆ 10:00 ಗಂಟೆಯಿಂದ ಮೇ ಮತ್ತು ಜೂನ್ ತಿಂಗಳಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ. ಟಿಟಿಡಿಯು ವೆಬ್‌ಸೈಟ್‌ನಲ್ಲಿ ತಿಳಿಸಿರುವ ತಿಂಗಳಿನಲ್ಲಿ ತಿರುಮಲದಲ್ಲಿ ವಿಶೇಷ ಮತ್ತು ಹೆಚ್ಚುವರಿ ವಸತಿ ಕೊಠಡಿಗಳನ್ನು ಬಿಡುಗಡೆ ಮಾಡಲಿದೆ. ಮೇ ಮತ್ತು ಜೂನ್‌ನಲ್ಲಿ ತಿರುಮಲಗೆ ಭೇಟಿ ನೀಡಬೇಕಾದರೆ ಟೋಕನ್ ಪಡೆಯಲು ಭಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಕಲ್ಯಾಣೋತ್ಸವ, ಉಂಜಲ್ ಸೇವೆ, ಆರ್ಜಿತ ಬ್ರಹ್ಮೋತ್ಸವಂ ಮತ್ತು ಸಹಸ್ರ ದೀಪಾಲಂಕಾರ ಸೇವಾ ಟೋಕನ್‌ಗಳು ಟಿಟಿಡಿ ವೆಬ್‌ಸೈಟ್‌ನಲ್ಲಿ ಸುಲಭವಾಗಿ ಲಭ್ಯವಿದ್ದು, ಇವುಗಳನ್ನು ಬುಕ್ ಮಾಡಲು ಭಕ್ತರು ಟಿಟಿಡಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕಾಗುತ್ತದೆ.
ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) ಏ. 1 ರಿಂದ ವೆಂಕಟೇಶ್ವರನ ಬೆಟ್ಟಕ್ಕೆ ಚಾರಣ ಮಾಡುವ ಭಕ್ತರಿಗೆ ದಿವ್ಯ ದರ್ಶನ ಟೋಕನ್‌ಗಳ ವಿತರಣೆಯನ್ನು ಪುನರಾರಂಭಿಸಲು ನಿರ್ಧರಿಸಲಾಗಿತ್ತು. ಒಂದು ವಾರದವರೆಗೆ ಪ್ರಾಯೋಗಿಕ ಆಧಾರದ ಮೇಲೆ ಟೋಕನ್‌ಗಳನ್ನು ನೀಡಲಾಗಿತ್ತು ಎಂದು ಆಡಳಿತ ಮಂಡಳಿ ತಿಳಿಸಿದೆ. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಟಿಟಿಡಿ ಅಧ್ಯಕ್ಷ ವೈ.ವಿ. ಸುಬ್ಬಾ ರೆಡ್ಡಿ ಮತ್ತು ಕಾರ್ಯನಿರ್ವಹಣಾಧಿಕಾರಿ ಎ.ವಿ. ಧರ್ಮಾ ರೆಡ್ಡಿ ಅವರು, ಭಕ್ತರಿಗೆ ದಿವ್ಯ ದರ್ಶನ ಟೋಕನ್‌ಗಳ ವಿತರಣೆಯನ್ನು ಪುನರಾರಂಭಿಸಲು ನಿರ್ಧರಿಸಿದ್ದೇವೆ ಹಾಗೂ ಬೇಸಿಗೆಯಲ್ಲಿ ತಿರುಮಲಕ್ಕೆ ಬರುವ ಭಕ್ತದಿಗಳಿಗೆ ಅನೇಕ ರೀತಿಯ ವ್ಯವಸ್ಥೆಗಳನ್ನು ಮಾಡಿದ್ದೇವೆ ಎಂದರು.
ಸಾಮಾನ್ಯವಾಗಿ, ಏ. 15 ರಿಂದ ಜುಲೈ 15 ರ ನಡುವೆ ಯಾತ್ರಿಕರ ಸಂಖ್ಯೆ ಗರಿಷ್ಠವಾಗಿರುತ್ತದೆ. ವಿಐಪಿ ಬ್ರೇಕ್ ದರ್ಶನ ಮತ್ತು ಎಸ್‌ಇಡಿ (ತಲಾ ₹ 300 ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳು) ಟಿಕೆಟ್‌ಗಳ ವಿತರಣೆಯನ್ನು ಕಡಿಮೆ ಮಾಡಲು ಟಿಟಿಡಿ ನಿರ್ಧರಿಸಿದೆ, ಶ್ರೀವಾಣಿ, ಪ್ರವಾಸೋದ್ಯಮ ಮತ್ತು ವರ್ಚುವಲ್ ಸೇವಾ ಕೋಟಾಗಳನ್ನು ಕಡಿತಗೊಳಿಸಲು ನಿರ್ಧರಿಸಿದ್ದು, ಇದೆಲ್ಲವೂ ಸಾಮಾನ್ಯ ಯಾತ್ರಾರ್ಥಿಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಕ್ರಮದ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ. ಅದಲ್ಲದೆ ಸಾಮಾನ್ಯ ಭಕ್ತರಿಗೆ ತ್ವರಿತ ದರ್ಶನಕ್ಕೆ ಅನುಕೂಲವಾಗುವಂತೆ ದೇವಾಲಯದ ಆಡಳಿತದೊಂದಿಗೆ ಸಹಕರಿಸುವಂತೆ ಟಿಟಿಡಿ ಅಧ್ಯಕ್ಷರು ವಿಐಪಿಗಳಿಗೆ ಮನವಿ ಮಾಡಿದ್ದಾರೆ.