ಪುತ್ತೂರು: ಮಾತೃಶಕ್ತಿ ಮೇಲೆ ಬಿಜೆಪಿಗೆ ವಿಶ್ವಾಸವಿದೆ. ಈ ಬಾರಿಗೆ ಪುತ್ತೂರಿನಲ್ಲಿ ಮಹಿಳೆಗೆ ಟಿಕೆಟ್ ನೀಡಿದ್ದು, ಪುತ್ತೂರು ಬಿಜೆಪಿ ಅಭ್ಯರ್ಥಿಗೆ ಎಲ್ಲರೂ ಮತ ನೀಡುವ ಮೂಲಕ ಗೆಲ್ಲಿಸಿ ಕೊಡುವಲ್ಲಿ ಪ್ರಯತ್ನಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ವಿನಂತಿಸಿದರು.
ಅವರು ಪುತ್ತೂರು ಭಾರತೀಯ ಜನತಾ ಪಾರ್ಟಿ ವತಿಯಿಂದ ಬಪ್ಪಳಿಗೆ ಜೈನಭವನದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು.
ಕಾಂಗ್ರಸ್ ಪಕ್ಷ ಮಹಿಳಾ ವಿರೋಧಿಯಾಗಿದೆ. ಈ ನಿಟ್ಟಿನಲ್ಲಿ ಈ ಬಾರಿ ಕಾಂಗ್ರೆಸ್ ಗೆ ಮಹಿಳೆಯರು ಮತ ನೀಡುವುದಿಲ್ಲ ಅವರು, ನರೇಂದ್ರಮೋದಿಯವರು ಕೇಂದ್ರ ಸರಕಾರದಿಂದ ಜನಸಮಾನ್ಯರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು,ದೇಶದ ಗ್ರಾಮ ಗ್ರಾಮಗಳಲ್ಲೀ ಆಶೀರ್ವಾದ ನೀಡಿದ್ದಾರೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದ ಅವರು, ಪುತ್ತೂರಿನಲ್ಲಿ ಶಾಸಕ ಸಂಜೀವ ಮಠಂದೂರು 1500 ಕೋಟಿ ಅನುದಾನ ತಂದು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಂಗನವಾಡಿ, ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಿದ್ದಾರೆ. ಕೋವಿಡ್ ಸಂದರ್ಭ ಸರಕಾರಿ ಆಸ್ಪತ್ರೆಗೆ ಆಕ್ಸಿಜನ್ ಪ್ಲಾಂಟ್ ಒದಗಿಸಿದ್ದಾರೆ. ಒಟ್ಟಾರೆ ಭರಪೂರ ಅಭಿವೃದ್ಧಿ ಕಾರ್ಯ ಮಾಡಿದ್ದು, ಇದು ಈ ಬಾರಿಯ ಪುತ್ತೂರು ಮಹಿಳಾ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಗೆಲುವಿಕೆ ಪೂರಕವಾಗಲಿದೆ. ಪುತ್ತೂರಿನಲ್ಲಿ ಶೇ.51 ಮಹಿಳಾ ಮತದಾರರಿದ್ದು, ಈ ಬಾರಿ ಮಹಿಳೆಯರು ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ ಎಂದು ಹೇಳಿದರು.
ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಮಾತನಾಡಿ, ಈ ಬಾರಿ ಜಿಲ್ಲೆಯಲ್ಲಿ ಇಬ್ಬರರು ಮಹಿಳೆಯರಿಗೆ ಮಹಿಳೆಯರಿಗೆ ಅವಕಾಶ ನೀಡುವ ಮೂಲಕ ಹಿಳೆಯರಿಗೆ ಸ್ಥಾನಮಾನ ನೀಡಿದೆ. ಅಲ್ಲದೆ ಹಿಂದುತ್ವಕ್ಕೆ ಧೈರ್ಯ ನೀಡಿದ ಪಕ್ಷವಿದ್ದರೆ ಅದು ಬಿಜೆಪಿ ಮಹಿಳೆಯರು ಎಚ್ಚೆತ್ತುಕೊಂಡು ಎಲ್ಲರೂ ಒಂದೇ ಭಾವನೆಯಿಂದ ಈ ಬಾರಿ ಬಿಜೆಪಿಗೆ ಮತ ನೀಡಿ ಗೆಲ್ಲಿಸಬೇಕೆಂದು ವಿನಂತಿಸಿದರು.
ಶಾಸಕ ಸಂಜೀವ ಮಠಂದೂರು, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮಾತನಾಡಿದರು. ವೇದಿಕೆಯಲ್ಲಿ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಜಿಲ್ಲಾ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ,ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಬಿಂದು ಹರೀಶ್, ಸರೋಜಿನಿ ಗಟ್ಟಿ, ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಸುಧೀರ್, ಅಪ್ಪಯ್ಯ ಮಣಿಯಾಣಿ ತ್ರಿವೇಣಿ ಪೆರ್ವೋಡಿ, ಡಾ.ಮಂಜುಳಾ ರಾವ್ ಉಪಸ್ಥಿತರಿದ್ದರು. ಪುತ್ತೂರು ಮಹಿಳಾ ಮೋರ್ಚಾ ಅಧ್ಯಕ್ಷೆ ಶರಾವತಿ ಸ್ವಾಗತಿಸಿದರು. ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು.