ಚಂಡೀಗಢ: ಪಂಜಾಬ್ನ ಮಾಜಿ ಮುಖ್ಯಮಂತ್ರಿ, ಶಿರೋಮಣಿ ಅಖಾಲಿದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ (95) ನಿನ್ನೆ ರಾತ್ರಿ ನಿಧನರಾಗಿದ್ದಾರೆ.
ಮೊಹಾಲಿಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಪ್ರಕಾಶ್ ಸಿಂಗ್ ಬಾದಲ್ ಚಿಕಿತ್ಸೆಗೆ ದಾಖಲಾಗಿದ್ದರು. ಪ್ರಕಾಶ್ ಸಿಂಗ್ ಬಾದಲ್ ನಿಧನ ಸುದ್ದಿಯನ್ನು ಅವರ ಆಪ್ತ ಸಹಾಯಕರು ಹಾಗೂ ಪುತ್ರರು ದೃಢಪಡಿಸಿದ್ದಾರೆ. ಪ್ರಕಾಶ್ ಸಿಂಗ್ ಬಾದಲ್ 5 ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿದ್ದರು. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅವರ ಅಂತಿಮ ಸಂಸ್ಕಾರ ಭಟಿಂಡದ ಬಾದಲ್ ಗ್ರಾಮದಲ್ಲಿ ನಡೆಯಲಿದೆ. ಬುಧವಾರ ಬೆಳಗ್ಗೆ ಅವರ ಪಾರ್ಥಿವ ಶರೀರವನ್ನು ಮೊಹಾಲಿಯಿಂದ ಬಾದಲ್ ಗ್ರಾಮಕ್ಕೆ ಸ್ಥಳಾಂತರಿಸಲಾಗುವುದು ಎಂದು ಅವರ ಮಗ, ಪಕ್ಷದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಮಾಹಿತಿ ನೀಡಿದ್ದಾರೆ. ಕೇಂದ್ರ ಸರಕಾರ ಬಾದಲ್ ನಿಧನಕ್ಕೆ ಎರಡು ದಿನಗಳ ಶೋಕಾಚರಣೆ ಘೋಷಿಸಿದೆ.
ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ
