ಪುತ್ತೂರು: 2018ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಶೇಖರ್ ಬಿ. ಮಾಡಾವು ಅವರು ಬಿಜೆಪಿಗೆ ಸೇರ್ಪಡೆಗೊಂಡರು.
ಕೇಂದ್ರ ಸಚಿವೆ ಡಾ. ಭಾರತಿ ಪವಾರ್ ಅವರು ಬಿಜೆಪಿ ಧ್ವಜ ನೀಡಿ, ಪಕ್ಷಕ್ಕೆ ಸೇರ್ಪಡೆಗೊಳಿಸಿದರು.
ಇದೇ ಸಂದರ್ಭ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಅಪ್ಪಯ್ಯ ಮಣಿಯಾಣಿ ಮೊದಲಾದವರು ಉಪಸ್ಥಿತರಿದ್ದರು.