ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರಿಂದ ಲೋಕಕಲ್ಯಾಣಾರ್ಥವಾಗಿ ಹಾಗೂ ವರುಣನ ಕೃಪೆಗಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ ಬುಧವಾರ ಬೆಳಿಗ್ಗೆ ನಡೆಯಿತು.

ದೇವಸ್ಥಾನದಲ್ಲಿ ಬೆಳಿಗ್ಗೆ ನಡೆಯುವ ನಿತ್ಯ ಬಲಿ ಬಳಿಕ ಶ್ರೀ ದೇವರ ಗರ್ಭಗುಡಿ ಎದುರು ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯರು ಪ್ರಾರ್ಥನೆ ಸಲ್ಲಿಸುವ ಮೂಲಕ ಸೀಯಾಳಾಭಿಷೇಕ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್, ರಾಧಾಕೃಷ್ಣ ಗೌಡ ನಂದಿಲ, ಯು.ಲೋಕೇಶ್ ಹೆಗ್ಡೆ, ಉದಯ್ ಹೆಚ್., ಚರಣ್ ಮತ್ತಿತರರು ಉಪಸ್ಥಿತರಿದದರು.