ಪುತ್ತೂರು: ಶತ್ರುನಿಗ್ರಹ ಕ್ಷೇತ್ರ ಶ್ರೀ ತಲೆಬೈಲು ನರಸಿಂಹ ದೇವರ ಮಠದಲ್ಲಿ ಕರ್ನಾಟಕ ರಾಜ್ಯ ವಿದ್ಯುಚ್ಛಕ್ತಿ ಮಂಡಳಿಯ ನಿರ್ದೇಶಕ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ರಾಜ್ಯದಲ್ಲಿ ಹಾಗೂ ಪುತ್ತೂರಿನಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಂತೆ ಪ್ರಾರ್ಥಿಸಿದರು.

ಇದೇ ಸಂದರ್ಭ ಮಠದ ಮಂಜುನಾಥ್ ಉಡುಪ ಅವರು ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.