ಇಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್‌ ಭೇಟಿ

ಚುನಾವಣಾ ಪ್ರಚಾರದಲ್ಲಿ ಕೇಂದ್ರದ ನಾಯಕರು ಭಾಗಿ

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕೇಂದ್ರ ಸಚಿವರು ಮತ್ತು ಬಿಜೆಪಿಯ ಪ್ರಮುಖ ನಾಯಕರ ದಂಡೇ ರಾಜ್ಯಕ್ಕೆ ಆಗಮಿಸುತ್ತಿದೆ. ವಿವಿಧ ರಾಜ್ಯಗಳ ಸಿಎಂ, ಡಿಸಿಎಂ ಮತ್ತು ಕೇಂದ್ರ ಸಚಿವರು ಆಗಮಿಸುತ್ತಿದ್ದಾರೆ. ಇಂದು ಮಂಡ್ಯ ಮತ್ತು ವಿಜಯಪುರ ಜಿಲ್ಲೆಗೆ ಹಿಂದೂ ಫಯರ್​ ಬ್ರ್ಯಾಂಡ್​ ಲೀಡರ್‌ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಆಗಮಿಸಲಿದ್ದಾರೆ.
ಲಖನೌನಿಂದ ಮೈಸೂರಿಗೆ ಆಗಮಿಸುವ ಯೋಗಿ ಆದಿತ್ಯನಾಥ್​​ 11 ಗಂಟೆಗೆ ಮಂಡ್ಯದಲ್ಲಿ ನಡೆಯುವ ರೋಡ್​​ ಶೋ ಮತ್ತು ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ. ಮಧ್ಯಾಹ್ನ 2.40ಕ್ಕೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. 3.05ಕ್ಕೆ ಬಸವನಬಾಗೇವಾಡಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್​​.ಕೆ.ಬೆಳ್ಳುಬ್ಬಿ ಪರ ಪ್ರಚಾರ ಮಾಡಲಿದ್ದಾರೆ. ಸಂಜೆ 4.50ಕ್ಕೆ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ್ ಪರ ಮತಯಾಚಿಸಲಿದ್ದಾರೆ. ಸಮಾವೇಶ ಮುಗಿದ ಬಳಿಕ ಲಖನೌಗೆ ನಿರ್ಗಮಿಸುತ್ತಾರೆ.

ರಕ್ಷಣಾ ಸಚಿವ ರಾಜನಾಥ್​ ಸಿಂಗ್
ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಅವರು ಇಂದು ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ 11ಕ್ಕೆ ಬೆಳಗಾವಿ ಜಿಲ್ಲೆಯ ಕಾಗವಾಡದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಿ, ಮಧ್ಯಾಹ್ನ 1.15ಕ್ಕೆ ಬೈಲಹೊಂಗಲದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ಸಂಜೆ 4ಕ್ಕೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಸಮಾವೇಶದಲ್ಲಿ ಮತಯಾಚನೆ ಮಾಡಲಿದ್ದಾರೆ.































 
 

ನಿರ್ಮಲಾ ಸೀತಾರಾಮನ್ ಭೇಟಿ
ಇಂದು ಕಲಬುರಗಿ ಜಿಲ್ಲೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 10ಕ್ಕೆ ಕಲಬುರಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ 11ಕ್ಕೆ ಕಲಬುರಗಿಯಲ್ಲಿ ಪ್ರಬುದ್ಧರ ಜತೆ ಸಂವಾದ ನಡೆಸಲಿದ್ದಾರೆ. ಅಪರಾಹ್ನ 3 ಗಂಟೆಗೆ ಅಳಂದದಲ್ಲಿ ನಡೆಯುವ ಮಹಿಳಾ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ಸಂಜೆ 4 ಗಂಟೆಗೆ ಕಲಬುರಗಿ ನಗರದಲ್ಲಿ ಮನೆ ಮನೆ ಸಂಪರ್ಕ ಮಾಡಲಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್ ಪ್ರಚಾರ
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ 11.30ಕ್ಕೆ ಹುಕ್ಕೇರಿಯಲ್ಲಿನ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ. ಮಧ್ಯಾಹ್ನ 2.30ಕ್ಕೆ ಗೋಕಾಕ್​ನಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ, ಸಂಜೆ 4 ಗಂಟೆಗೆ ರಾಮದುರ್ಗದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗುತ್ತಾರೆ.

ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್
ವಿಜಯಪುರ ಜಿಲ್ಲೆಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಇಂದು ಪ್ರಚಾರ ನಡೆಸಲಿದ್ದಾರೆ. ಸಿದ್ದೇಶ್ವರ ಆಶ್ರಮಕ್ಕೆ ಭೇಟಿ ನೀಡಿ, ಬೆಳಗ್ಗೆ 11 ಗಂಟೆಗೆ ವಿಜಯಪುರ ಬಿಜೆಪಿ ಕಚೇರಿಯಲ್ಲಿ ದೇವೇಂದ್ರ ಫಡ್ನವಿಸ್​ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕನಮಡಿ ಧರಿದೇವರ ದೇವಸ್ಥಾನಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬಬಲೇಶ್ವರದಲ್ಲಿ ದೇವೇಂದ್ರ ಫಡ್ನವಿಸ್ ಪ್ರಚಾರ ಸಭೆ ನಡೆಸಲಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top