ಪುತ್ತೂರು : ಬೈಪಾಸ್ ರಸ್ತೆಯಲ್ಲಿರುವ ಆಶ್ಮಿ ಕಂಫರ್ಟ್ ನಲ್ಲಿ ಬಿಜೆಪಿ ಚುನಾವಣಾ ಕಚೇರಿ ಗುರುವಾರ ಬೆಳಿಗ್ಗೆ ಉದ್ಘಾಟನೆಗೊಂಡಿತು.
ಗಣಹೋಮ ನೆರವೇರಿಸುವ ಮೂಲಕ ಕಚೇರಿ ಉದ್ಘಾಟನೆಗೊಂಡು ಚುನಾವಣೆಯ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಬೆಳಿಗ್ಗೆ ಕರ್ನಾಟಕದ ಬಿಜೆಪಿ ಮುಖಂಡರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲೇ ಕಚೇರಿ ಉದ್ಘಾಟನೆಗೊಂಡಿತು. ಗಣಹೋಮ ನೆರವೇರಿದ ಬಳಿಕ ಬಿಜೆಪಿ ಮುಂಖಡರು, ಕಾರ್ಯಕರ್ತರು ಎಲ್ ಇಡಿ ಪರದೆ ಮೂಲಕ ನರೇಂದ್ರ ಮೋದಿಯರ ಭಾಷಣಕ್ಕೆ ಕಿವಿಯಾದರು.
ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಬಿಜೆಪಿ ಗ್ರಾಮಾಂತರ ಹಾಗೂ ನಗರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ. ಜಗನ್ನಿವಾಸ ರಾವ್, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅಪ್ಪಯ್ಯ ಮಣಿಯಾಣಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ವಿದ್ಯಾ ಆರ್.ಗೌರಿ, ಗೋಪಾಲಕೃಷ್ಣ ಹೇರಳೆ, ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ಸಹಜ್ ರೈ ಬಳೆಜ್ಜ, ರಾಧಾಕೃಷ್ಣ ಬೋರ್ಕರ್, ಬೂಡಿಯಾರ್ ರಾಧಾಕೃಷ್ಣ ರೈ ಮತ್ತಿತರರು ಉಪಸ್ಥಿತರಿದ್ದರು.