ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ಬಸವ ಸಮರ್ಪಣೆ ಕಾರ್ಯಕ್ರಮ ನಡೆಯಿತು.
ದೈವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಮಧೇನು ಗೋ ಶಾಲೆಯಿಂದ ಬಸವ ನೀಡುವ ನಿರ್ಣಯ ಕೈಗೊಳ್ಳಲಾಯಿತು. ಅದರಂತೆ ದೇವಸ್ಥಾನದ ಗರ್ಭಗುಡಿ ಎದುರಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಿ.ಎಸ್.ಭಟ್ ನೇತೃತ್ವದಲ್ಲಿ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಬಸವನನ್ನು ಬಲ್ನಾಡು ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಗೌಡ ಕಾಂತಿಲ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ರವೀಂದ್ರನಾಥ ರೈ ಬಳ್ಳಮಜಲು, ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕಿರಣ್, ಅಶೋಕ್, ನಾರಾಯಣ ಪೂಜಾರಿ, ಭೋಜರಾಜ ಗೌಡ, ಕಚೇರಿ ವ್ಯವಸ್ಥಾಪಕ ಚಂದ್ರಶೇಖರ ಭಟ್ ಮತ್ತಿತರರು ಉಪಸ್ಥಿತರಿದ್ದರು.