ಆಶಾ ತಿಮ್ಮಪ್ಪ ಪರ ಅಣ್ಣಾಮಲೈ ಮತಯಾಚನೆ | ಅರಿಯಡ್ಕ, ಕೊಳ್ತಿಗೆ, ಮಾಡ್ನೂರು, ನೆಟ್ಟಣಿಗೆ ಮುಡ್ನೂರು ಪ್ರದೇಶದಲ್ಲಿ ಮತಯಾಚನೆ | ಜನಮಂಗಲ ಸಭಾಂಗಣದಲ್ಲಿ ಮತದಾರರ ಸಭೆ

ಪುತ್ತೂರು: ಕರ್ನಾಟಕ ರಾಜ್ಯ ಚುನಾವಣಾ ಸಹಪ್ರಭಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಶನಿವಾರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಅರಿಯಡ್ಕ, ಕೊಳ್ತಿಗೆ, ಮಾಡ್ನೂರು, ನೆಟ್ಟಣಿಗೆ ಮುಡ್ನೂರು ಪ್ರದೇಶದಲ್ಲಿ ಮತಯಾಚನೆ ನಡೆಸಿದರು.

ಬಳಿಕ ಜನಮಂಗಲ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಹಲವಾರು ಅಭಿವೃದ್ಧಿ ಪರ ಕಾರ್ಯಕ್ರಮಗಳು ನಡೆದಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವು ಅಪಾಯಕಾರಿ ಸನ್ನಿವೇಶಗಳನ್ನು ಎದುರಿಸಿಯೂ ಭಾರತದ ಹೆಮ್ಮೆಯನ್ನು ಅಲ್ಲೂ ಪಸರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಇದರ ಜೊತೆಗೆ, ದೇಶದ ಜನಸಾಮಾನ್ಯರಿಗೂ ಮೋದಿ ಆಡಳಿತ ತಲುಪಿರುವುದು ನಮ್ಮ ಹೆಮ್ಮೆ. ಪ್ರತಿಯೊಬ್ಬರಿಗೂ ಮನೆ ನೀಡಬೇಕು, ಆ ಮನೆಯವರಿಗೆ ಉದ್ಯೋಗ ಕಲ್ಪಿಸಬೇಕು ಎಂಬ ದಿಶೆಯಲ್ಲೂ ಕೆಲಸ ಸಾಗಿದೆ. ಇಂತಹ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಬೇಕಾದರೆ ಕರ್ನಾಟಕದಲ್ಲೂ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದಂತಹ ಒಂದೊಂದು ಕ್ಷೇತ್ರವೂ ಅಗತ್ಯ ಎಂದರು.

ವೇದಿಕೆಯಲ್ಲಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಮೊದಲಾದವರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top