ಪುತ್ತೂರು : ತಾಲೂಕು ಸ್ವೀಪ್ಸ ಮಿತಿಯ ಸಹಕಾರದೊಂದಿಗೆ ರೋಟರಿ ಪುತ್ತೂರು ಎಲೈಟ್ ರೋಟರ್ಯಾಕ್ಟ್ ಕ್ಟ್ಕ್ಲಬ್, ಬೆಟ್ಟಂಪಾಡಿ ಪ್ರಥಮದರ್ಜೆ ಕಾಲೇಜು ಸಹಯೋಗದಲ್ಲಿ ಮತದಾನ ಜಾಗೃತಿಗೆ ಬೀದಿನಾಟಕ” ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು.

ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟನಿ ಪ್ರಕಾಶ್ ಮೊಂತೆರೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮತದಾನ ಮಾಡುವ ಬಗೆಗಿನ ಹೆಚ್ಚಿನ ಅರಿವು ವಿದ್ಯಾರ್ಥಿಗಳಿಗೆ ಹಾಗೂ ಸಮಾಜಕ್ಕೆ ಅಗತ್ಯ, ಮತದಾನ ಮಾಡುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ”ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧಿಕಾರಿ ನವೀನ್ ಕುಮಾರ್ ಭಂಡಾರಿ, ಮಾತನಾಡಿ, ಯಾವುದೇ ಆಮಿಷಗಳಿಗೆ ಬಲಿಯಾಗದೆ ದೈರ್ಯದಿಂದ ಸ್ವಾಭಿಮಾನದಿಂದ ನಿಮ್ಮ ಹಕ್ಕನ್ನು ಚಲಾಯಿಸಿ” ಎಂದು ಕರೆ ನೀಡಿದರು.
ರೊಟೇರಿಯನ್ ಆಸ್ಕರ್ ಆನಂದ್, , ಸಂಸಾರ ಜೋಡುಮಾರ್ಗದ ನಿರ್ದೇಶಕ ಹಾಗೂ ಪತ್ರಕರ್ತ ಮೌನೇಶ್ ವಿಶ್ವಕರ್ಮ, ಬೀದಿ ನಾಟಕದ ಕಲಾವಿದರು, ,ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉಪಾನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ನಾತಕೋತ್ತರ ಸಮಾಜಕಾರ್ಯ ಸಂಯೋಜಕ ಮಣಿ ಸ್ವಾಗತಿಸಿದರು.