ಪುತ್ತೂರು: ಚುನಾವಣಾ ದಿನಾಂಕ ಹತ್ತಿರ ಬರುತ್ತಿದ್ದಂತೆ ಅಭ್ಯರ್ಥಿಗಳ ಪ್ರಚಾರದ ವೇಗ ಮತ್ತಷ್ಟು ಹೆಚ್ಚುತ್ತಿದೆ.

ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಚಿಲ್ತಡ್ಕ ಕಾರ್ಯಕರ್ತರೊಂದಿಗೆ ಫೀಲ್ಡ್ ಗೆ ಇಳಿದು ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ.

ಇಂದು ಬಡಗನ್ನೂರು, ಪಡುಮಲೆಯಲ್ಲಿ ಮನೆ ಮನೆ ಭೇಟಿ ನೀಡಿ ಮತ ಯಾಚನೆ ನಡೆಸಿದರು ಹಾಗೂ ಪಡುಮಲೆ ಕಿನ್ನಿಮಣಿ ಪೂಮಣಿ ದೈವಸ್ಥಾನ ಹಾಗೂ ಪಡುಮಲೆ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.