ಪುತ್ತೂರು: ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಹಾಗೂ ಸಂತ ಫಿಲೋಮಿನಾ ಕಾಲೇಜು ಸಹಯೋಗದಲ್ಲಿ ಕ್ಯಾಥೊಲಿಕ್ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿರುವ ಪ್ರಾಥಮಿಕ ಶಾಲಾ ಅಧ್ಯಾಪಕರಿಗೆ 5 ದಿನಗಳ ಇಂಗ್ಲೀಷ್ ಭಾಷಾ ಕಾರ್ಯಗಾರವನ್ನು ಆಯೋಜಿಸಲಾಯಿತು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟೊನಿಪ್ರಕಾಶ್ ಮೊಂತೆರೋರವರು ಮಾತನಾಡಿ, ವಯೋ ಸಹಜ ಸಮಸ್ಯಗಳನ್ನು ಬದಿಗಿರಿಸಿ ಅಧ್ಯಾಪಕ ವೃತ್ತಿಯಲ್ಲಿ ನಿರತರಾದವರು ದಿನನಿತ್ಯ ಹೊಸ ವಿಷಯಗಳನ್ನು ಕಲಿತುಕೊಳ್ಳಬೇಕು. ತನ್ನ ದಿನದ ಒಂದೆರಡು ಗಂಟೆಗಳನ್ನು ಓದಿಗಾಗಿ ಮೀಸಲಾಗಿಡಬೇಕು. ಇದರಿಂದ ಖಂಡಿತವಾಗಿಯೂ ಪರಿಣಾಮಕಾರಿಯಾಗಿ ಪಾಠ ಮಾಡಬಹುದು ಎಂದರು.
ಕಾಲೇಜಿನ ಸಂಚಾಲಕ ವಂ| ಲಾರೆನ್ಸ್ ಮಸ್ಕರೇಞಸ್ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಯಾಗಲೀ ಅಧ್ಯಾಪಕನಾಗಲೀ ತಮಗೊದಗಿ ಬಂದ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡಿದ್ದೇ ಆದಲ್ಲಿ ಜೀವನದಲ್ಲಿ ಯಶಸ್ಸು ಸಾಧ್ಯ”ಎಂದುಹೇಳಿದರು.
ಸೈಂಟ್ ವಿಕ್ಟರ್ಸ್ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಹ್ಯಾರಿ ಡಿಸೋಜ ಹಾಗೂ ಸಂತ ಫಿಲೋಮಿನಾ ಹಿರಿಯ ಪ್ರಾಧಮಿಕ ಶಾಲಾ ಮುಖ್ಯ ಶಿಕ್ಷಕ ಇವ್ಲಿನ್ ಡಿಸೋಜ ಕಾರ್ಯಗಾರದ ಕುರಿತು ತಮ್ಮಅನುಭವ ಹಂಚಿಕೊಂಡರು.
ಕಾಲೇಜಿನ ಪ್ರದರ್ಶನ ಕಲಾ ಘಟಕದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕ್ಯಾಂಪಸ್ ನಿರ್ದೇಶಕ, ಉಪನ್ಯಾಸಕ ವಂ| ಸ್ಟ್ಯಾನಿ ಪಿಂಟೋ ಸ್ವಾಗತಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಭಾರತಿ ಎಸ್ ರೈ ವಂದಿಸಿದರು. ಸಹಾಯಕ ಪ್ರಾಧ್ಯಾಪಕ ಪ್ರಶಾಂತ್ ರೈ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕಿ ನೋವೆಲಿನ್ ಡಿಸೋಜ ಉಪಸ್ಥಿತರಿದ್ದರು.