ವ್ಯಕ್ತಿತ್ವ ವಿಕಸನ ಶಿಬಿರ ತರಂಗ-2023 ಉದ್ಘಾಟನೆ

ಪುತ್ತೂರು: ವಿದ್ಯಾರ್ಥಿಗಳು ಜ್ಞಾನದ ನಿಧಿಯಾಗಬೇಕು. ಪ್ರತಿಯೊಬ್ಬರ ಅಂತರಂಗದಲ್ಲಿ ಅಗಾಧ ಶಕ್ತಿಯಿದೆ. ಅದರ ಬಗ್ಗೆ ಯಾರಿಗೂ ಅರಿವಿಲ್ಲ.ಅಂತರಂಗದ ಶಕ್ತಿಯನ್ನು ಪರಿಪೂರ್ಣವಾಗಿ ಬಳಸಿಕೊಳ್ಳುವವರು ಜೀವನದಲ್ಲಿ ಯಶಸ್ಸು ಪಡೆಯುತ್ತಾರೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಹೈಸ್ಕೂಲು ಮತ್ತು 10ನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿಯುಸಿ ಸೇರ ಬಯಸುವ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಮೂರು ದಿನಗಳ ಶಿಬಿರ ತರಂಗ- 2023 ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ, ಕ್ರೀಡೆ, ಚಿತ್ರಕಲೆ, ಸಂಗೀತ , ನಾಟಕ ಹೀಗೆ ಪ್ರತೀ ಕ್ಷೇತ್ರದ ಚಟುವಟಿಕೆಗಳಲ್ಲಿಯೂ ನಿತ್ಯಭಾಗಿಯಾಗುವ ಮೂಲಕ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತಾ ಸಾಗಬೇಕು. ಆಗ ಮಾತ್ರ ಪರಿಪೂರ್ಣ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ ಎಂದ ಅವರು, ಉತ್ತಮ ಆಲೋಚನೆಗಳಿಂದ ಜೀವನದ ಯಾವುದೇ ಸವಾಲನ್ನು ಧೈರ್ಯವಾಗಿ ಎದುರಿಸಬಹುದು.ಜೀವನದಲ್ಲಿಎದುರಾಗುವ ಸವಾಲನ್ನು ಎದುರಿಸಿ ಸೋಲಲ್ಲೂ ಗೆಲುವನ್ನುಕಾಣುವ ಮನೋವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಎಂದು ಹೇಳಿದರು.































 
 

ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ಸುಧಾ ಹೇರಳೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲೆ,ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಇಂದಿನ ಯುವಜನತೆಗೆ ಪರಿಚಯಿಸುವ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಶೈಕ್ಷಣಿಕ ಕಾಲ ಘಟ್ಟದಲ್ಲಿ ಪಠ್ಯದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿ ನಮ್ಮನ್ನು ಹೆಚ್ಚು ಸಕ್ರಿಯರಾಗಿಸುವ ಬಗ್ಗೆ ಚಿಂತನೆ ನಡೆಸಬೇಕಾಗಿದೆ ಎಂದರು.

ಕಾಲೇಜಿನ ಪ್ರಿನ್ಸಿಪಾಲ್ ಪ್ರಸಾದ್ ಶ್ಯಾನಭಾಗ್ ಮಾತನಾಡಿ, ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕಾಗಿ ತನ್ನ ಜೀವನದಲ್ಲಿ ಏಕಾಗ್ರತೆ , ಬದ್ಧತೆ, ಗುರಿಗಳನ್ನು ಅಳವಡಿಸಿಕೊಳ್ಳಬೇಕು. ಅದಕ್ಕಾಗಿ ಇಂತಹ ಕಾರ್ರ್ಯಾಗಾರ ಸಹಕಾರಿ ಎಂದರು.

ಕಾರ್ಯಾಗಾರದಲ್ಲಿ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಿಂದ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ನಿವೃತ್ತ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಕಾಶ್ ಪ್ರಭು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದೀಪ್ತಿ ಸ್ವಾಗತಿಸಿ, ಶ್ರಾವ್ಯ ವಂದಿಸಿದರು. ಸುಮಾ ಭಟ್  ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top