ಪುತ್ತೂರು ಮೂಲದ ಯುವತಿ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ

ಪುತ್ತೂರು: ಪುತ್ತೂರು ಮೂಲದ ಯುವತಿಯೋರ್ವಳು ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸ್ನಾನತ್ತಾರು ಚಂದ್ರಶೇಖರ ರೈ ಹಾಗೂ ಸೋಮಾವತಿ ರೈ ದಂಪತಿ ಪುತ್ರಿ ಶ್ರುತಿ ಸಿ. ರೈ (22) ಆತ್ಮಹತ್ಯೆ ಮಾಡಿಕೊಂಡವರು.

ಶ್ರುತಿ ಬೆಂಗಳೂರಿನಲ್ಲಿ ಎರಡು ವರ್ಷಗಳಿಂದ ಅನಿಮೇಷನ್ ಶಿಕ್ಷಣ ಪಡೆಯುತ್ತಿದ್ದು, ಶಿಕ್ಷಣ ಮುಗಿಸಿ ಕೆಲಸದ ಹುಡುಕಾಟದಲ್ಲಿದ್ದರು.



































 
 

ಅದಕ್ಕಾಗಿ ಅಲ್ಲಿಯೇ ವಾಸ್ತವ್ಯ ಹೂಡಿದ್ದರು.

ತನ್ನ ಬಾಡಿಗೆ ರೂಂನಲ್ಲಿ ಕೆಲವು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top