ಮೇ 5 : ರಾಷ್ಟ್ರಮಟ್ಟದ ವಿದ್ಯಾರ್ಥಿ ಕಾರ್ಯಾಗಾರ “ಜ್ಞಾನ ಸಂಗಮ-2023”

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ನವದೆಹಲಿ ಭಾರತೀಯ ತಾಂತ್ರಿಕ ಶಿಕ್ಷಣ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ ಹಾಗೂ ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ “ಜ್ಞಾನ ಸಂಗಮ-2023”ನ್ನು ಮೇ 5 ಶುಕ್ರವಾರ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ಆಯೋಜಿಸಲಾಗಿದೆ.

ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅವರ ಪ್ರಾಜೆಕ್ಟ್‌ಗೆ ಸಂಬಂದಿಸಿದಂತೆ ಪ್ರಬಂಧಗಳನ್ನು ಮಂಡಿಸುವುದರ ಮೂಲಕ ತಮ್ಮಲ್ಲಿರುವ ಹೊಸ ಹೊಸ ಆವಿಷ್ಕಾರಗಳನ್ನು ಇತರರೊಂದಿಗೆ ಹಂಚಿಕೊಳ್ಳುವುದಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ಸಲುವಾಗಿ ಮತ್ತು ವಿದ್ಯಾರ್ಥಿಗಳಿಗೆ ಸಂಶೋಧನಾ ವಿಭಾಗದಲ್ಲಿ ಹೆಚ್ಚು ಆಸಕ್ತಿಯನ್ನು ಮೂಡಿಸುವುದರ ಜತೆಯಲ್ಲಿ ಅವರನ್ನು ಉತ್ತಮ ತಂತ್ರಜ್ಞರನ್ನಾಗಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದೆ.

ರಾಷ್ಟ್ರಾದ್ಯಂತ ವಿವಿಧ ಕಾಲೇಜುಗಳ ಇಂಜಿನಿಯರಿಂಗ್ ವಿಭಾಗದ ಸುಮಾರು 400 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು, ವಿವಿಧ ವಿಭಾಗಗಳಲ್ಲಿ ಒಟ್ಟು 60 ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಅಲ್ಲದೆ ಪ್ರಾಜೆಕ್ಟ್‌ಗಳಿಗೆ ಸಂಬಂಧಪಟ್ಟ 50 ಕ್ಕೂ ಮಿಕ್ಕಿ ಪೋಸ್ಟರ್‌ಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ. ಇಲ್ಲಿ ಮಂಡಿಸಲ್ಪಡುವ ಎಲ್ಲಾ ಪ್ರೌಢ ಪ್ರಬಂಧಗಳನ್ನು ಮುದ್ರಿಸಿ ಸಂಚಿಕೆಯ ರೂಪದಲ್ಲಿ ಪ್ರಕಟಿಸಿ ಬಿಡುಗಡೆಗೊಳಿಸಲಾಗುವುದು.































 
 

ಬೆಳಿಗ್ಗೆ 9.30 ಕ್ಕೆ ನಡೆಯುವ ಉಧ್ಘಾಟನಾ ಸಮಾರಂಭದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ರವೀಶ್.ಪಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಜೆ 3.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮಂಗಳೂರಿನ ಸೈಂಟ್ ಜೋಸೆಫ್ಸ್ ಇಂಜಿನಿಯರಿಂಗ್ ಕಾಲೇಜಿನ ಮಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವಿಜಯ್.ವಿ.ಎಸ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.  ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಅಧ್ಯಕ್ಷತೆ ವಹಿಸಲಿದ್ದಾರೆ.  ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಗಣ್ಯರು ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top