ಪುತ್ತೂರು : ಮೇ 10 ರಂದು ನಡೆಯುವ ಚುನಾವಣೆ ಹಿನ್ನೆಯಲ್ಲಿ ಪುತ್ತೂರು ಕೆಎಸ್ ಆರ್ ಟಿಸಿ ನಿಗಮದ ಬಸ್ ಗಳನ್ನು ಪುತ್ತೂರು, ಸುಳ್ಯ, ಮಡಿಕೇರಿ, ಬಂಟ್ವಾಳ, ಬೆಳ್ತಂಗಡಿ ಹಾಗೂ ವಿರಾಜಪೇಟೆ ವಿಧಾಸಭಾ ಕ್ಷೇತ್ರದ ಚುನಾವಣೆ ಕಾರ್ಯಕ್ಕಾಗಿ ಬಳಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮೇ 9 ಹಾಗೂ 10 ರಂದು ಬಸ್ ಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆಎಸ್ ಆರ್ ಟಿಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಚುನಾವಣೆ ಸಂದರ್ಭ ಪೊಲೀಸ್್ ಬಂದೋಬಸ್ತ್ ಗಾಡಿ ಬಸ್ ಗಳನ್ನು ಬಳಸಲಾಗುತ್ತಿದ್ದು, ಗರಿಷ್ಠ ಸಂಖ್ಯೆಯಲ್ಲಿ ಬಸ್ ಗಳನ್ನು ನಿಯೋಜಿಸಲಾಗುತ್ತದೆ.
ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಶಾಲಾ ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸಬೇಕೆಂದು ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.