ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಎರಡನೇ ಸುತ್ತಿನ ಮತಪ್ರಚಾರ ಕಾರ್ಯ ಶುಕ್ರವಾರ ಬಿರುಸಿನಿಂದ ಆರಂಭಗೊಂಡಿದೆ.

ಶುಕ್ರವಾರ ಏಕಕಾಲದಲ್ಲಿ 220 ಬೂತ್ಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತ ಯಾಚನೆ ಕಾರ್ಯ ನಡೆಸಲಾಯಿತು. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಇರ್ದೆ ಗ್ರಾಮದ ಗೋಳಿ ಪದವಿನಲ್ಲಿ ಮನೆ ಮನೆ ಭೇಟಿ ನೀಡಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
























