ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಉಪ್ಪಿನಂಗಡಿಯಲ್ಲಿ ಬೃಹತ್ ರೋಡ್ ಶೋ ಸೋಮವಾರ ಬೆಳಿಗ್ಗೆ ಜರಗಿತು.
ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ, ಪುತ್ತೂರಿನಲ್ಲಿ ಸಮರ್ಥ ಅಭ್ಯರ್ಥಿಯನ್ನು ಬಿಜೆಪಿ ಕಣಕ್ಕೆ ಇಳಿಸಲಾಗಿದೆ. ಅಪಪ್ರಚಾರಗಳು ಏನೇ ನಡೆದರೂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿ ಆಶಾ ತಿಮ್ಮಪ್ಪ ಅವರು ಕಾರ್ಯವೈಖರಿ ಮೆಚ್ಚುವಂತಹದ್ದೇ ಆಗಿತ್ತು. ಭ್ರಷ್ಟಾಚಾರ ರಹಿತವಾಗಿ ಆಡಳಿತ ನಡೆಸಿದ್ದಲ್ಲದೇ, ಸಂಘಟನಾತ್ಮಕವಾಗಿಯೂ ಗುರುತಿಸಿಕೊಂಡವರು. ಕಳೆದ ಮೂರುವರೆ ವರ್ಷದಲ್ಲಿ ಬಿಜೆಪಿ ಸರಕಾರದ ಅಭಿವೃದ್ಧಿ ಪರ ಆಡಳಿತ, ಹಿಂದುತ್ವದ ಪರವಾಗಿ ಸರಕಾರ ಕೈಗೊಂಡ ದಿಟ್ಟ ಹೆಜ್ಜೆಗಳು, ಕೇಂದ್ರ ಸರಕಾರದ ಕೊಡುಗೆಗಳು ಈ ಬಾರಿ ಪುತ್ತೂರಿನಲ್ಲಿ ಬಿಜೆಪಿಯನ್ನು ಗೆಲ್ಲಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜ್ಯದಲ್ಲಿ 130ಕ್ಕೂ ಅಧಿಕ ಸೀಟುಗಳನ್ನು ಪಡೆದುಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು. ಪುತ್ತೂರಿನಲ್ಲಿ ಇದಕ್ಕೆ ಪೂರಕವಾಗಿ ಬಿಜೆಪಿ ಜಯಗಳಿಸಲಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರದ ಅಗತ್ಯತೆಯನ್ನು ಜನರು ಮನಗಂಡಿದ್ದಾರೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ, ಅಲ್ಪಸಂಖ್ಯಾತರ ಓಲೈಕೆ ಹೆಚ್ಚಾಗಲಿದೆ ಎನ್ನುವುದು ಈಗಾಗಲೇ ಸಾಬೀತಾಗಿದೆ ಎಂದರು.
ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕುಂಟಾರು ರವೀಶ ತಂತ್ರಿ ಮಾತನಾಡಿ, ಭಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಿರುವ ಕಾಂಗ್ರೆಸ್, ಇದೇ ರೀತಿಯ ನೀತಿಯನ್ನು ಅಧಿಕಾರಕ್ಕೆ ಬಂದರೆ ಜಾರಿಗೆ ಮಾಡುವುದರಲ್ಲಿ ಎರಡು ಮಾತಿಲ್ಲ. ಇದಕ್ಕೆ ಅವಕಾಶ ನೀಡಲೇಬಾರದು. ಹಿಂದುಗಳ ಶಕ್ತಿಯನ್ನು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ತೋರಿಸಿಕೊಡಬೇಕು ಎಂದರು.
ರೋಡ್ ಶೋದಲ್ಲಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಕಿಶೋರ್ ಬೊಟ್ಯಾಡಿ, ಭರತ್ ಕುಮ್ಡೇಲು ಮೊದಲಾದವರು ಭಾಗಿಯಾದರು