ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ಬುಧವಾರ ಬೆಳಿಗ್ಗೆಯೇ ಮತ ಚಲಾಯಿಸಿದರು.

ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಕುಂತೂರು ಮತಗಟ್ಟೆಯಲ್ಲಿ, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಮುಂಡೂರು ಮತಗಟ್ಟೆಯಲ್ಲಿ, ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಅವರು ಗುತ್ತಿಗಾರಿನ ಮೆಟ್ಟಿನಡ್ಕದಲ್ಲಿ ತಮ್ಮ ಮತ ಚಲಾಯಿಸಿದರು.
ಬಳಿಕ ಮತಗಟ್ಟೆಯ ಹೊರಗಡೆ ತಮ್ಮ ಬೂತ್ ಪ್ರಮುಖರು, ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿ, ಫೊಟೊ ಕ್ಲಿಕ್ಕಿಸಿಕೊಂಡರು.