ಪುತ್ತೂರು: ಚುನಾವಣೆಯ ಪೂರ್ವಭಾವಿಯಾಗಿ ಟೆಸ್ಟಿಂಗ್ ಓಟ್ ಪ್ರಕ್ರಿಯೆ ನಡೆದಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತದಾನದ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಮತದಾರ ತನ್ನ ಮನದಾಳದ ನಿರ್ಧಾರವನ್ನು ಪ್ರಕಟಿಸಲಿದ್ದಾನೆ.
ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿ ಚುನಾವಣೆ ನಡೆಯಲಿದ್ದು, ಮತಗಟ್ಟೆ ಅಧಿಕಾರಿಗಳು ಮಂಗಳವಾರ ಸಂಜೆಯೇ ಬಂದು ಸನ್ನದ್ಧರಾಗಿದ್ದಾರೆ.
ಕಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪ, ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ, ಜೆಡಿಎಸ್ ಅಭ್ಯರ್ಥಿಯಾಗಿ ದಿವ್ಯಪ್ರಭಾ ಚಿಲ್ತಡ್ಕ, ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ, ಎಸ್.ಡಿ.ಪಿ.ಐ. ಅಭ್ಯರ್ಥಿಯಾಗಿ ಶಾಫಿ ಬೆಳ‍್ಳಾರೆ, ಆಮ್ ಆದ್ಮಿ ಅಭ್ಯರ್ಥಿಯಾಗಿ ವಿಶು ಕುಮಾರ್ ಮೊದಲಾದವರು ಪರೀಕ್ಷೆಗೆ ಇಳಿದಿದ್ದಾರೆ. ಇವರಲ್ಲಿ ತಮ್ಮ ನಾಯಕನಾರು ಎನ್ನುವುದನ್ನು ಮತದಾರರು ಇಂದು ನಿರ್ಧರಿಸಲಿದ್ದಾರೆ. ಮೇ 13ರಂದು ಪುತ್ತೂರಿನ ಶಾಸಕ ಯಾರು ಎನ್ನುವುದು ತಿಳಿಯಲಿದೆ.