ಮತ ಎಣಿಕೆಯಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿವರೆಗೆ 144 ಸೆಕ್ಷನ್

ಪುತ್ತೂರು: ಮತ ಎಣಿಕೆ ಕಾರ್ಯ ನಡೆಯುವ ಮೇ 13ರಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದ.ಕ. ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ದ.ಕ. ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಆದೇಶಿಸಿದ್ದಾರೆ.

ಮೇ 13ರ ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್‌ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ವಿಧಿಸಿ ಆದೇಶ ಹೊರಡಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top