ಪುತ್ತೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಂಬ್ರ ಸರಕಾರಿ ಪದವಿ ಪೂರ್ವ ಕಾಲೇಜು ಶೇ. 80 ಫಲಿತಾಂಶ ದಾಖಲಿಸಿದೆ.
ಕಾಲೇಜಿನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ 105 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 84 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 44 ವಿದ್ಯಾರ್ಥಿಗಳಲ್ಲಿ 36 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ. 81.8 ಫಲಿತಾಂಶ ಬಂದಿರುತ್ತದೆ. ಸ್ವಾತಿ ಪಿ. 530 ಮತ್ತು ಅಕ್ಷಿತಾ 529 ಅಂಕ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 37 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ 86.04 ಫಲಿತಾಂಶ ಬಂದಿರುತ್ತದೆ. ಮುನೀಬಾ 516 ಅಂಕ ಗಳಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 18 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 11 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ. 61.4 ಫಲಿತಾಂಶ ಬಂದಿರುತ್ತದೆ. ಆಯಿಷತ್ ಮಝೀನಾ 562 ಮತ್ತು ಖದೀಜತ್ ಸಫ್ರೀನಾ 551 ಅಂಕ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ದಾಖಲಾತಿ ಆರಂಭ:
ಕುಂಬ್ರ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಇದೀಗ ಕರ್ನಾಟಕ ಪಬ್ಲಿಕ್ ಸ್ಕೂಲಿನ ಮಾನ್ಯತೆ ದೊರಕಿದ್ದು, ಸರಕಾರದ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯ ನೆಲೆಯಲ್ಲಿ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದವೂ ಶ್ರಮಿಸುತ್ತಿದೆ. ಇದೀಗ ಪಿಯುಸಿಯ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಕ್ಕೆ ದಾಖಲಾತಿಗಳು ಆರಂಭಗೊಂಡಿದೆ ಎಂದು ಕಾಲೇಜು ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.