ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪುತ್ತೂರು ಶಾಸಕರಾಗಿ ಆಯ್ಕೆಯಾದ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ,ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದರು. ಅಲ್ಲಿಯೂ ಅಶೋಕ್ ಕುಮಾರ್ ರೈ ಅವರ ದೊಡ್ಡ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದು, ಶುಭಕೋರಿದರು.
ಬಳಿಕ ಚರ್ಚ್ ಹಾಗೂ ಮಸೀದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು, ಹೂಹಾರ ಹಾಕಿ, ಸಿಹಿ ಹಂಚಿ ಸಂಭ್ರಮಸಿದರು. ಪುತ್ತೂರಿನಲ್ಲಿ ವಾಹನ ಜಾಥಾ ಮಾಡಿ,ಸಂಭ್ರಮಿಸಿದರು.