ಕಾಂಗ್ರೆಸ್​​ಗೆ ಭರ್ಜರಿ ಗೆಲುವು; ಭಾವುಕರಾದ ಡಿಕೆ ಶಿವಕುಮಾರ್ | ಕಾಂಗ್ರೆಸ್ 136, ಬಿಜೆಪಿಗೆ 64, ಜೆಡಿಎಸ್ 20 ಕ್ಷೇತ್ರ

ಬೆಂಗಳೂರು: ಅಖಂಡ ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು. ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಚಳ ಬಹುಮತ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾವುಕರಾದರು.

ರಾಜ್ಯದಲ್ಲಿ ಕಾಂಗ್ರೆಸ್ 136 ಸ್ಥಾನಗಳಲ್ಲಿ ಜಯ ಸಾಧಿಸಿದ್ದು, ಬಿಜೆಪಿ 64 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಜೆಡಿಎಸ್ 20 ಸ್ಥಾನಗಳಿಗೆ ಸೀಮಿತಗೊಂಡಿದೆ. ಉಳಿದಂತೆ 4 ಕ್ಷೇತ್ರಗಳಲ್ಲಿ ಪಕ್ಷೇತರರು ಜಯ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದು ಖಚಿತಗೊಂಡಿದೆ.

ಈ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸಿಗೆ ರಾಜ್ಯದಲ್ಲಿ 136 ಕ್ಷೇತ್ರಗಳಲ್ಲಿ ಜಯ ಗಳಿಸಿದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ನನ್ನ ಪಕ್ಷದ ಕಾರ್ಯಕರ್ತರು, ನಾಯಕರ ಒಗ್ಗಟ್ಟಿನ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ. ನಾನು ಪಕ್ಷದ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಹೇಳಿದ್ದೆ, ಜತೆಗೂಡುವುದು ಆರಂಭ, ಜತೆಗೂಡಿ ಯೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು. ಅದೇ ರೀತಿ ನಮ್ಮ ನಾಯಕರು ಹಾಗೂ ಕಾರ್ಯಕರ್ತರ ಒಗ್ಗಟ್ಟಿನ ಪರಿಶ್ರಮದಿಂದ ಪಕ್ಷಕ್ಕೆ ಈ ಯಶಸ್ಸು ಸಿಕ್ಕಿದೆ ಎಂದರು.





























 
 

ಇದು ಒಬ್ಬನಿಂದ ಬಂದಿರುವ ಯಶಸ್ಸಲ್ಲ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಸೇರಿದಂತೆ ಕಾಂಗ್ರೆಸ್ ಶಾಸಕರುಗಳು, ಎಐಸಿಸಿ ಪದಾಧಿಕಾರಿಗಳು, ಉಸ್ತುವಾರಿಗಳು, ರಾಜ್ಯದ ನಾಯಕರುಗಳು, ಪಕ್ಷದ ಪದಾಧಿಕಾರಿಗಳು, ಬೂತ್ ಮಟ್ಟದಲ್ಲಿ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿರುವ ಎಲ್ಲಾ ಕಾರ್ಯಕರ್ತರಿಗೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top