ಪುತ್ತೂರು: ಸೋಲನ್ನು ನಾನು ಒಪ್ಪಿಕೊಂಡಿದ್ದೇನೆ. ಈ ಸೋಲನ್ನು ನಾನು ಕಾರ್ಯಕರ್ತರ ಮೇಲೆ ಹಾಕುವುದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಹೇಳಿದರು.
ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದ ಬಳಿಕ ಅವರು ನ್ಯೂಸ್ ಪುತ್ತೂರು ಜೊತೆ ಮಾತನಾಡಿದರು.
ಸಂಜೀವ ಮಠಂದೂರು ಅವರು ಶಾಸಕರಾಗಿ ಒಂದೂವರೆ ಸಾವಿರ ಕೋಟಿ ರೂ. ಅನುದಾನ ತಂದು, ಅಭಿವೃದ್ಧಿ ಕಾರ್ಯ ಮಾಡಿದರು. ಆದರೆ ಇದನ್ನು ಮತದಾರರು ಗುರುತಿಸದೇ ಇರುವುದು ವಿಪರ್ಯಾಸ. ಬಿಜೆಪಿ ಸರಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರು ಗುರುತಿಸಿಲ್ಲ ಎನ್ನುವುದನ್ನು ಚುನಾವಣೆ ತೋರಿಸಿಕೊಟ್ಟಿದೆ. ಆದ್ದರಿಂದ ಮುಂದಿನ 5 ವರ್ಷ ಪುತ್ತೂರಿನಲ್ಲಿಯೇ ಇದ್ದು, ಕೆಲಸ ಮಾಡುತ್ತೇನೆ. ಬಿಜೆಪಿ ಅಭ್ಯರ್ಥಿ ಶಾಸಕನಾಗಿ ಆಯ್ಕೆ ಆಗುವವರೆಗೆ ಶ್ರಮಿಸುತ್ತೇನೆ. ಕಾರ್ಯಕರ್ತರ್ಯಾರು ಧೃತಿಗೆಡದೆ ಮುಂದಿನ ಜಿಪಂ, ತಾಪಂ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವಂತೆ ಕೆಲಸ ಮಾಡಬೇಕು ಎಂದರು.