ಬೆಂಗಳೂರು: ಚುನಾವಣೆಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿರುವ ಕಾಂಗ್ರೆಸ್, ಇದೀಗ ಸಿಎಂ ಪಟ್ಟಕ್ಕಾಗಿ ಪೈಪೋಟಿ ಶುರುವಾಗಿದೆ.
ಬೆಳಿಗ್ಗೆಯಿಂದಲೇ ಟೆಂಪಲ್ ರನ್ ಶುರುವಿಟ್ಟುಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಅವರ ಪರವಾಗಿ ಒಕ್ಕಲಿಗ ಸ್ವಾಮೀಜಿಗಳು ಬ್ಯಾಟಿಂಗ್ ಮಾಡುತ್ತಿದ್ದಾರೆ. ಒಕ್ಕಲಿಗ ಸಮುದಾಯ ಸ್ವಾಮೀಜಿಗಳು ಸಭೆ ಕರೆದು, ಡಿಕೆ ಅವರನ್ನೇ ಸಿಎಂ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ.
ಇನ್ನೊಂದೆಡೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ. ಇದರ ನಡುವೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಸಿದ್ಧತೆ ನಡೆಯುತ್ತಿದೆ. ಕಾಂಗ್ರೆಸ್ ವೀಕ್ಷಕರು ಸಭೆಯಲ್ಲಿ ಉಪಸ್ಥಿತರಿರಲು ಆಗಮಿಸುತ್ತಿದ್ದಾರೆ. ಚುನಾವಣೆಯಲ್ಲಿ ಆಯ್ಕೆಯಾಗಿರುವ ಶಾಸಕರು ಸಭೆಗೆ ಆಗಮಿಸುತ್ತಿದ್ದಾರೆ. ಇದರಲ್ಲಿ ಯಾರ ಬೆಂಬಲ ಹೆಚ್ಚು ಯಾರಿಗೆ ಸಿಗಲಿದೆ ಎನ್ನುವುದೇ ಮುಂದಿರುವ ಕುತೂಹಲ. 5 ಗಂಟೆಗೆ ಶುರುವಾಗಬೇಕಿದ್ದ ಸಭೆ ತಡವಾಗುತ್ತಿದೆ.