ಪುತ್ತೂರು: ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಹಿಂದುಗಳ ಮೇಲೆ ದೌರ್ಜನ್ಯ ಹಾಗೂ ಅಶಾಂತಿಯ ವಾತಾವರಣಕ್ಕೆ ಎಡೆ ನೀಡುವ ಕಾರ್ಯ ನಿರಂತರವಾಗಿ ನಡೆಯಲಿದೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹೋರಾಟಕ್ಕೆ ಸದಾ ಸಿದ್ಧರಾಗಿ ಎಂದು ನಿಕಟಪೂರ್ವ ಶಾಸಕ ಸಂಜೀವ ಮಠಂದೂರು ಕರೆ ನೀಡಿದರು.
ಡಿ.ವಿ. ಹಾಗೂ ನಳಿನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವ ಪ್ರಕರಣವನ್ನು ಖಂಡಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ತಾಲೂಕು ಆಡಳಿತ ಸೌಧದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ಮಾಜಿ ಸಿಎಂ ಸದಾನಂದ ಗೌಡ ಅವರು ಪುತ್ತೂರಿನ ಅಶಾಂತಿಯ ವಾತಾವರಣಕ್ಕೆ ಇತಿಶ್ರೀ ಹಾಕಿದವರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಶಾಂತಿಯ ವಾತಾವರಣಕ್ಕೆ ಕಡಿವಾಣ ಹಾಕಿದವರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭಾ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪ್ರಮುಖರಾದ ಆಶಾ ತಿಮ್ಮಪ್ಪ, ಸಾಜಾ ರಾಧಾಕೃಷ್ಣ ಆಳ್ವ, ಪಿ.ಜಿ. ಜಗನ್ನಿವಾಸ್ ರಾವ್, ಚಂದ್ರಶೇಖರ್ ರಾವ್ ಬಪ್ಪಳಿಗೆ, ವಿದ್ಯಾ ಆರ್. ಗೌರಿ, ಲೊಕೇಶ್ ಹೆಗ್ಡೆ, ಉಷಾ ಮುಳಿಯ ಉಪಸ್ಥಿತರಿದ್ದರು.