ಪಿಯು ಫಲಿತಾಂಶ: ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ

ಸುಳ್ಯ: ಪಿಯು ಪರೀಕ್ಷೆಯಲ್ಲಿ ಇಲ್ಲಿನ ಪಂಜ ಸರಕಾರಿ ಪದವಿ ಪೂರ್ವ ಕಾಲೇಜು ಶೇ. 100 ಫಲಿತಾಂಶ ದಾಖಲಿಸಿದೆ. ಈ ಮೂಲಕ ಜಿಲ್ಲೆಯಲ್ಲೇ ಶೇ. 100 ಫಲಿತಾಂಶ ದಾಖಲಿಸಿದ ಏಕೈಕ ಸರಕಾರಿ ಪದವಿ ಪೂರ್ವ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಒಟ್ಟು 43 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಕಲಾ ಹಾಗೂ ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಇದರಲ್ಲಿ 8 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದ ದಿವ್ಯ ಕೆ.ಎಲ್. 548, ಸಾಬಿತ್ ಎ.ಬಿ. 546, ಸ್ವಾತಿ 530, ಮಹಮ್ಮದ್ ಹಿಶಾಂ 525, ಫಾತಿಮಾತ್ ಮುರ್ಶಿದಾ 522, ಜೀವನ್ ಎ. 510 ಹಾಗೂ ಕಲಾ ವಿಭಾಗದ ಸ್ವಾತಿ ಕೆ. 538, ಶ್ವೇತಾ ಬಿ. 517 ಅಂಕ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top