ನಳಿನ್, ಡಿವಿ ಅವಹೇಳನ ಮಾಡಿ ಬ್ಯಾನರ್ ಹಾಕಿದವರ ಬಂಧನ | ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹಾಗೂ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಅವಹೇಳನ ಮಾಡಿದ ಬ್ಯಾನರ್ ಹಾಕಿ, ಅದಕ್ಕೆ ಚಪ್ಪಲಿ ಹಾರ ಹಾಕಿದ್ದ ಇಬ್ಬರನ್ನು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ನರಿಮೊಗರು ಗ್ರಾಮದ ಸಹೋದರರಾದ ವಿಶ್ವನಾಥ್ ಹಾಗೂ ಮಾಧವ ಎಂದು ಗುರುತಿಸಲಾಗಿದೆ. ಪುತ್ತೂರು ನಗರಸಭೆ ಆಯುಕ್ತ ಮಧು ಎಸ್. ಮನೋಹರ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು.

ಬಿಜೆಪಿ ನಾಯಕರಾದ ನಳಿನ್ ಕುಮಾರ್  ಕಟೀಲ್ ಹಾಗೂ ಡಿವಿ ಸದಾನಂದ ಗೌಡ ಅವರನ್ನು ಬಿಜೆಪಿ ಸೋಲಿಗೆ ಹೊಣೆಯಾಗಿಸಿ, ಅವಹೇಳನ ಮಾಡಲಾಗಿತ್ತು. ಮಾತ್ರವಲ್ಲ ಭಾವಪೂರ್ಣ ಶ್ರದ್ಧಾಂಜಲಿ ಶೀರ್ಷಿಕೆಯನ್ನು ನೀಡಲಾಗಿತ್ತು. ಇದಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಲಾಗಿತ್ತು. ಇದರ ಬಗ್ಗೆ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಸಂಜೆ ವೇಳೆಗೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top