ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಂಜಿಲಾಡಿಯಲ್ಲಿ ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಎರಡು ಆನೆಗಳು ಪ್ರತ್ಯಕ್ಷಗೊಂಡು ಈ ಭಾಗದಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ.
ರೆಂಜಿಲಾಡಿ ಗ್ರಾಮದ ಕಾನದಬಾಗಿಲು ಎಂಬಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಭಾನುವಾರ ಇಳಿ ಸಂಜೆ ಮರಿ ಆನೆಯೊಂದಿಗೆ ದೊಡ್ಡ ಆನೆ ಸಂಚರಿಸುತ್ತಿರುವುದನ್ನು ಸ್ಥಳೀಯರು ಕಂಡಿದ್ದಾರೆ. ಕಾಡಾನೆಗಳು ಅರಣ್ಯ ಪ್ರದೇಶದಲ್ಲಿ ಮುಂದೆ ಸಾಗಿದೆ ಎಂದು ತಿಳಿಸಿದ್ದಾರೆ. ಕಾಡಾನೆ ಸಂಚರಿಸುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ.
ಕಳೆದ ಎರಡು ತಿಂಗಳ ಹಿಂದೆ ರೆಂಜಲಾಡಿ ಗ್ರಾಮದ ಮೀನಾಡಿ ನೈಲ ಎಂಬಲ್ಲಿ ಇಬ್ಬರು ಅಮಾಯಕರನ್ನು ಆನೆ ಬಲಿ ತಗೊಂಡ ಬಳಿಕ ಈ ಭಾಗದಲ್ಲಿ ಭಯದ ನೆರಳಿನಲ್ಲಿ ಬದುಕುಬೆಕಾದ ಅನಿವಾರ್ಯತೆ ಸೃಷ್ಠಿಯಾಗಿದ್ದು. ಆಗಾಗ ಇಲ್ಲಿ ಆನೆಗಳು ಪ್ರತ್ಯಕ್ಷವಾಗುತ್ತಿರುವುದರಿಂದ ಜನ ಮತ್ತೆ ಮತ್ತೆ ಜೀವ ಕೈಯಲ್ಲಿ ಹಿಡಿದು ಬದುಕಬೇಕಾಗಿದೆ