ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರದೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿಯ ಬರಹ ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ 7 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಭಿ (ಅವಿನಾಶ್), ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಅವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು, ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನೂ ಇಬ್ಬರು ತಲೆಮರೆಸಿಕೊಂಡಿರುವುದಾಗಿ ತಿಳಿದು ಬಂದಿದೆ.
ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು ಬ್ಯಾನರ್ ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಲಾಗಿತ್ತು. ಪ್ರಕರಣಕ್ಕೆ ಸಂಬಂದಪಟ್ಟಂತೆ ಮೇ 15ರಂದು ನರಿಮೊಗರು ನಿವಾಸಿಗಳಾದ ವಿಶ್ವನಾಥ್ ಮತ್ತು ಮಾಧವ ಎಂಬವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.