ವಿಟ್ಲ: ವಿಟ್ಲದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಆರೋಪಿ ಕನ್ಯಾನದ ಅಬೂಬಕ್ಕರ್ (46) ಬಂಧಿತ. ದಾರಿ ಕೇಳುವ ನೆಪದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದ.
ಘಟನೆ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ಅವರು ಮನೆಯವರಿಗೆ ಧೈರ್ಯ ತುಂಬಿ, ಸಾಂತ್ವಾನ ಹೇಳಿದ್ದರು. ಬಳಿಕ ಪೊಲೀಸ್ ಠಾಣೆಗೂ ಭೇಟಿ ನೀಡಿ, ಆರೋಪಿಯನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದರು.
ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರೂ ಕೂಡ ಆರೋಪಿಯ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದರು.
ಆರೋಪಿ ಪತ್ತೆಯ ಕಾರ್ಯದಲ್ಲಿ ವಿಟ್ಲ ಠಾಣೆಯ ಪೊಲೀಸ್ ನಿರೀಕ್ಷಕ ನಾಗರಾಜ್ ಹೆಚ್.ಈ.ಅವರ ಮಾರ್ಗದರ್ಶನದಂತೆ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕ ಕಾರ್ತಿಕ್ ಕಾತರಕಿ ಹಾಗೂ ಸಿಬ್ಬಂದಿಗಳಾದ ಹೆಚ್.ಸಿ. ರಕ್ಷಿತ್ ಮತ್ತು ಪಿಸಿ ಹೇಮರಾಜ ಕಾರ್ಯಾಚರಣೆ ನಡೆಸಿದ್ದರು.