ಪುತ್ತೂರು: ಅವಹೇಳನಕಾರಿಯಾಗಿ ಬ್ಯಾನರ್ ಹಾಕಿ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ದೌರ್ಜನ್ಯದ ಬಗೆಗಿನ ಫೊಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಒಟ್ಟು ಪ್ರಕರಣದ ಮಾಹಿತಿ ಪಡೆದುಕೊಂಡು, ಘಟನೆಯ ಸತ್ಯಾಂಶದ ಬಗ್ಗೆ ತಿಳಿದುಕೊಳ್ಳಲಾಗುವುದು. ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೊಟೋ, ವೀಡಿಯೋದ ಬಗ್ಗೆ ಶಾಸಕರನ್ನು ಕೇಳಿದಾಗ, ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದರು.