ಪುತ್ತೂರು: ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಕಾರ್ಯನಿರ್ವಾಹಕ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ , ಆಯೋಗದ ಕಾನೂನು ಸಲಹೆಗಾರ ಸುನಿಲ್ ಕುಮಾರ್ ಶೆಟ್ಟಿ ಪೊಲೀಸ್ ದೌರ್ಜ ನ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಅವಿನಾಶ್ ಹಾಗೂ ದೀಕ್ಷಿತ್ ಅವರನ್ನು ಶುಕ್ರವಾರ ಭೇಟಿ ಮಾಡಿ ಸಾಂತ್ವನ ಹೇಳಿದರು.
ಕಾನೂನು ಮೀರಿ ಅಮಾನುಷವಾಗಿ ನಡೆಸಿಕೊಂಡ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿ, ಅಮಾಯಕರಿಗೆ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸೂಕ್ತ ರೀತಿಯಲ್ಲಿ ಸಹಾಯ ಮಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಆಯೋಗದ ವತಿಯಿಂದ ಧನಸಹಾಯ ಮಾಡಲಾಯಿತು.
ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ರಾಘವ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.