ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಸದಸ್ಯರಾದ ಭಾಸ್ಕರ ಎಂ. ಮಳವೂರು ಸಿದ್ಧಾರ್ಥನಗರ ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕರೂ, ಮಳವೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೂ, ಹಿರಿಯ ಸಮಾಜ ಸೇವಕರೂ ಹಾಗೂ ಜಿಲ್ಲೆಯ ಖ್ಯಾತ ವಾದ್ಯ ಕಲಾವಿದರೂ ಆಗಿದ್ದರು.
ಅವರು ನಾಲ್ಕು ಮಕ್ಕಳು, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಮೃತರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ದ. ಕ. ಜಿಲ್ಲಾ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸಿದೆ.

























