RSS ಪುತ್ತೂರು ಜಿಲ್ಲಾ ಸಂಘಚಾಲಕ್ ಕೊಡ್ಮಣ್ ಕಾಂತಪ್ಪ ಶೆಟ್ಟಿ ನಿಧನ

ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ, ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೇ 22ರಂದು ಮಧ್ಯಾಹ್ನ  ನಿಧನರಾದರು.

ಕೆಲ ಸಮಯಗಳಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದರು.

ಅವರು ಪತ್ನಿ, ತಮ್ಮ ಸಹಿತ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಸಂಸದ ನಳಿನ್ ಕುಮಾರ್ ಕಟೀಲ್, ಆರ್ ಎಸ್ ಎಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಸಹಿತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.































 
 

ರಾ.ಸ್ವ.ಸೇ. ಸಂಘದಲ್ಲಿ ಮಾತ್ರವಲ್ಲ ಭಾರತೀಯ ಜನತಾ ಪಕ್ಷದಲ್ಲೂ ಗುರುತಿಸಿಕೊಂಡಿದ್ದ ಅವರು, ಒಂದು ಬಾರಿ ಪುದು ಜಿ.ಪಂ. ಚುನಾವಣೆಗೆ ಸ್ಪರ್ಧಿ ಸೋಲನ್ನನುಭವಿಸಿದ್ದರು. ಬಳಿಕ ರಾಜಕಾರಣದಿಂದ ದೂರ ಇದ್ದು, ರಾ.ಸ್ವ.ಸೇ. ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು.

ಸಾಮಾಜಿಕ ಕಾರ್ಯ, ಕಲಾಸೇವೆ

ಮೇರಮಜಲು ಗ್ರಾ.ಪಂ. ಅಧ್ಯಕ್ಷರಾಗಿ, ಪರಂಗೀಪೇಟೆ ವ್ಯ.ಸೇ.ಸ. ಸಂಘದ ಅಧ್ಯಕ್ಷರಾಗಿಯೂ ಸುದೀರ್ಘ ಅವಧಿಯ ಕಾಲ ಸೇವೆ ಸಲ್ಲಿಸಿದ್ದರು. ಕೊಡ್ಮಾಣ್ ಶ್ರೀ ಶಾರದ ಪೂಜಾ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ, ಕೊಡ್ಮಾಣ್ ಪ್ರೌಢಶಾಲಾ ಎಸ್ ಡಿಎಂಸಿ ಸದಸ್ಯರಾಗಿ ಹಾಗೂ ವಿವಿಧ ಧಾರ್ಮಿಕ ಕೇಂದ್ರಗಳ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಈ ಹಿಂದೆ ವಿಟ್ಲ ವಿಧಾನಸಭಾ ಕ್ಷೇತ್ರವಿದ್ದಾಗ ಬಿಜೆಪಿ ವಿಟ್ಲ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಸ್ಥಳೀಯವಾಗಿ ಯುವಕರ ಸಾಮಾಜಿಕ ಚಟುವಟಿಕೆಗೆ ಮಾರ್ಗದರ್ಶಕರು, ಪ್ರೇರಣಾ ಶಕ್ತಿಯಾಗಿದ್ದರು. ಹವ್ಯಾಸಿ ನಾಟಕ ಕಲಾವಿದರಾಗಿದ್ದ ಕಾಂತಪ್ಪ ಶೆಟ್ಟಿ ಕೆಲ ನಾಟಕಗಳಲ್ಲಿಯೂ ಬಣ್ಣಹಚ್ಚಿದ್ದರು. ಸಂಘದಲ್ಲಿ ಕಾಂತಪ್ಪಣ್ಣ ಎಂದೇ ಚಿರಪರಿಚಿತರಾಗಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top