ಬೆಂಗಳೂರು: ರಾಜ್ಯ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಮಂಗಳವಾರ ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಸ್ಪೀಕರ್ ಸ್ಥಾನಕ್ಕೆ ನಾಳೆ (ಮೇ 24) ಚುನಾವಣೆ ನಡೆಯಲಿದ್ದು, ಯು.ಟಿ ಖಾದರ್ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದೆ.
ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಝಮೀರ್ ಅಹ್ಮದ್, ಶಾಸಕ ಅಜಯ್ ಸಿಂಗ್ ಉಪಸ್ಥಿತರಿದ್ದರು.