ಕಡಬ : ವ್ಯಕ್ತಿಯೊಬ್ಬರು ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು.
ಶಾಂತಿಮೊಗರು ಸೇತುವೆಯ ಮೇಲೆ ತನ್ನ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಜಿಗಿದಿದ್ದಾರೆ ಎನ್ನಲಾಗಿದ್ದು, ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು, ಶವವನ್ನು ಮೇಲಕ್ಕೆತ್ತಲಾಗಿದೆ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.