ಪುತ್ತೂರು: ಇಲ್ಲಿನ ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಸಂಪ್ಯ ಅಧೀನದಲ್ಲಿ ಕಾರ‍್ಯನಿರ್ವಹಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇನ್ವಿಕ್ತ ಕಾಮರ್ಸ್ ಅಸೋಸಿಯೇಶನ್ ವತಿಯಿಂದ “Maths Shortcut tricks and Tips for Competitive Exam” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ‍್ಯಗಾರ ಮೇ.26ರಂದು ನಡೆಯಿತು.

ಕಾರ‍್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ವೇತ ಜೆ ರಾವ್ ಆಗಮಿಸಿ “Maths Shortcut tricks and Tips for Competitive Exam” ಎಂಬ ವಿಷಯದ ಕುರಿತು ಕಾರ‍್ಯಗಾರವನ್ನು ನಡೆಸಿಕೊಟ್ಟರು.

ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಟಿ ಎ ,ವಾಣಿಜ್ಯ ವಿಭಾಗದ ಮುಖ್ಯಸ್ಥ ಕಿಶೋರ್ ಕುಮಾರ್ ರೈ ಕೆ, ಇನ್ವಿಕ್ತ ಕಾಮರ್ಸ್ ಅಸೋಸಿಯೇಶನ್ ನ ಸಂಯೋಜಕ ಭವ್ಯಶ್ರೀ ಬಿ ಹಾಗು ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ಮೇಘಶ್ರೀ, ಇನ್ವಿಕ್ತ ಕಾಮರ್ಸ್ ಅಸೋಸಿಯೇಶನ್ ನ ವಿದ್ಯಾರ್ಥಿ ಸಂಯೋಜಕ ಮಿಥುನ್ ಕುಮಾರ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಟೀನ ಸ್ವಾಗತಿಸಿ, ವಿಸ್ಮಿತ ವಂದಿಸಿ ಹಾಗು ಸಾಕ್ಷಿ ಕಾರ‍್ಯಕ್ರಮವನ್ನು ನಿರೂಪಿಸಿದರು.