ಪುರಾತನ ದೇವಳದ ಗರ್ಭಗುಡಿಯೊಳಗೆ ರಕ್ತ, ಮಾಂಸದ ಕೋಡಿ | ದುಷ್ಕರ್ಮಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ

ಚಿಕ್ಕಬಳ್ಳಾಪುರ: ಪುರಾತನ ದೇವಾಲಯದ ಒಳಗಡೆ ರಕ್ತ ಹಾಗೂ ಮಾಂಸ ಹಾಕಿ, ಅಪವಿತ್ರಗೊಳಿಸಿದ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಿಂದ ವರದಿಯಾಗಿದೆ. ರಕ್ತದ ಕೋಡಿ ದೇವರ ಮೂರ್ತಿಯ ಪಾದದವರೆಗೂ ಚೆಲ್ಲಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಮಳಮಾಚನಹಳ್ಳಿ ಗ್ರಾಮದ ಬ್ಯಾಟರಾಯ ಸ್ವಾಮಿ ದೇವಸ್ಥಾನದ ಕಿಟಕಿಯಿಂದ ರಕ್ತ, ಮಾಂಸವನ್ನು ಚೆಲ್ಲಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ, ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ದುಷ್ಕರ್ಮಿಗಳ ಬಂಧನಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top