ಪುತ್ತೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ 24 ಶಾಸಕರು ಸಂಪುಟದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ಬೆಳಿಗ್ಗೆ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಥಾವರ್ ಚಂದ್ ಗೆಹ್ಲೋಟ್ , ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನೂತನ ಸಚಿವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.