ಸಂಸತ್‌ ಭವನದಲ್ಲಿ ಸೆಂಗೋಲ್‌ ಪ್ರತಿಷ್ಠಾಪನೆ

ಹೊಸದಿಲ್ಲಿ : ಬ್ರಿಟಿಷರು ಭಾರತ ಬಿಟ್ಟು ಹೋಗುವಾಗ ಅಧಿಕಾರ ಹಸ್ತಾಂತರದ ಸಂಕೇತವಾಗಿ ನೀಡಿದ್ದ ಐತಿಹಾಸಿಕ ಸೆಂಗೋಲ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು ನೂತನ ಸಂಸತ್‌ ಭವನದಲ್ಲಿ ಸ್ಪೀಕರ್‌ ಪೀಠದ ಬದಿಯಲ್ಲಿ ಪ್ರತಿಷ್ಠಾಪಿಸಿದರು.

ಪುರೋಹಿತರಿಂದ ಸೆಂಗೋಲ್​​ ಸ್ವೀಕರಿಸಿದ ಪ್ರಧಾನಿ ಮೋದಿ ದಶದಿಕ್ಕುಗಳಿಗೂ ನಮಸ್ಕರಿಸಿ ಅದನ್ನು ಭಕ್ತಿಭಾವದಿಂದ ಸ್ಪೀಕರ್‌ ಆಸನದ ಬಳಿಯಲ್ಲಿ ಅದಕ್ಕಾಗಿ ರಚಿಸಿದ್ದ ಪೀಠದ ಬಳಿಗೊಯ್ದರು. ಬಳಿಕ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಕರೆದು ಅವರ ಜತೆಗೂಡಿ ಸೆಂಗೋಲ್‌ ಪ್ರತಿಷ್ಠಾಪಿಸಿದರು.

ಸಂಸತ್ ಭವನ ಪ್ರವೇಶಿಸಿದ ಮೋದಿಯವರು  ಮೊದಲಿಗೆ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು. ನಂತರ ಗಣಪತಿ ಪೂಜೆ ಮೂಲಕ ಹವನ ಆರಂಭವಾಯಿತು. ವಿರೋಧ ಪಕ್ಷಗಳ ಬಹಿಷ್ಕಾರದ ನಡುವೆಯೂ ವಿವಿಧ ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮಗಳು ನಡೆಯುತ್ತಿವೆ. ಸಂಸತ್ ಭವನಕ್ಕೆ ಪ್ರಧಾನಿ ಮೋದಿ ಅವರೊಂದಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಾಥ್ ನೀಡಿದ್ದಾರೆ.































 
 

ಸಂಸತ್​ ಭವನದ ಕಟ್ಟಡ ನಿರ್ಮಿಸಿದ ಕಾರ್ಮಿಕರಿಗೆ ಪ್ರಧಾನಿ ಮೋದಿ ಸನ್ಮಾನ ಮಾಡಿದರು. ಪೂಜಾ-ಕೈಂಕರ್ಯಗಳನ್ನು ಕರ್ನಾಟಕದ ಶೃಂಗೇರಿಯ ಪುರೋಹಿತರಾದ ಸೀತಾರಾಮ ಶರ್ಮಾ, ಶ್ರೀರಾಮ ಶರ್ಮಾ, ಲಕ್ಷ್ಮೀಶ ತಂತ್ರಿಯವರು ನೆರವೇರಿಸಿದರು. ನೂತನ ಸಂಸತ್​​ ಭವನದಲ್ಲಿ ವಿವಿಧ ಧರ್ಮದ ಮುಖಂಡರಿಂದ ಪ್ರಾರ್ಥನೆ ನೆರವೇರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್​ ಓಂ ಬಿರ್ಲಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್​ ಸಿಂಗ್​, ಸಚಿವ ಪ್ರಹ್ಲಾದ ಜೋಶಿ, ಎಸ್​. ಜೈಶಂಕರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಲವರು ಭಾಗಿಯಾಗಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top