ಕಡಬ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸದುಪಯೋಗವನ್ನು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಮಕ್ಕಳು ಪಡೆದುಕೊಳ್ಳಬೇಕು. ಆ ಮೂಲಕ ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಲಿ ಎಂದು ಬೆಳಂದೂರು ಗ್ರಾ.ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಹೇಳಿದರು.
ಅವರು ಬೆಳಂದೂರು ಗ್ರಾ.ಪಂ. ಗ್ರಂಥಾಲಯ ವತಿಯಿಂದ ಬೆಳಂದೂರು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕುದ್ಮಾರು ಶಾಲಾ ಮುಖ್ಯಶಿಕ್ಷಕ ಕುಶಾಲಪ್ಪ ಗೌಡ ಅವರು ಮಾಹಿತಿ ನೀಡಿದರು. ಗ್ರಾ. ಪಂ. ಉಪಾಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಸದಸ್ಯರಾದ ವಿಠಲ ಗೌಡ ಅಗಳಿ, ಪ್ರವೀಣ್ ಕೆರೆನಾರು, ಜಯಂತ ಅಬೀರ, ತಾರಾ ಅನ್ಯಾಡಿ, ಉಮೇಶ್ವರಿ ಅಗಳಿ, ಪಾರ್ವತಿ ಮರಕ್ಕಡ, ಹರಿಣಾಕ್ಷಿ ಬನಾರಿ, ಮೋಹನ್ ಅಗಳಿ ಮತ್ತಿತರರು ಉಪಸ್ಥಿತರಿದ್ದರು.
ಗ್ರಾ.ಪಂ. ಪ್ರಭಾರ ಅಭಿವೃಧಿ ಅಧಿಕಾರಿ ನಾರಾಯಣ್ ಸ್ವಾಗತಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ವಿಮಲಾ ವಂದಿಸಿದರು. ಗ್ರಾ.ಪಂ. ಲೆಕ್ಕ ಸಹಾಯಕಿ ಸುನಂದಾ ಕಾರ್ಯಕ್ರಮ ನಿರೂಪಿಸಿದರು. ಗ್ರಾ.ಪಂ. ಸಿಬ್ಬಂದಿಗಳು ಸಹಕರಿಸಿದರು. ಬಳಿಕ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.