ಪುತ್ತೂರು: ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಜೂನ್ 11ರಿಂದ 13ರವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ.
ಜೂನ್ 11ರಂದು ಬೆಳಿಗ್ಗೆ 10.30ಕ್ಕೆ ಹೊರೆಕಾಣಿಕೆ ಸಂಗ್ರಹ, ಸಂಜೆ 4.30ಕ್ಕೆ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಿಂದ ಶ್ರೀ ವಿಷ್ಣುಮೂರ್ತಿ ದೈವದ ಬೆಳ್ಳಿಯ ಮೊಗ ಮತ್ತು ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಸಂಜೆ 5ಕ್ಕೆ ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ, 5.30ರಿಂದ ಪ್ರಾಸಾದ ಪರಿಗ್ರಹ, ಪ್ರಾರ್ಥನೆ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಬಿಂಬಾಧಿವಾಸ, ದಿಕ್ಪಾಲಬಲಿ, ಅನ್ನಸಂತರ್ಪಣೆ ನಡೆಯಲಿದೆ.
ಜೂನ್ 12ರಂದು ಬೆಳಿಗ್ಗೆ 7ರಿಂದ ಗಣಹೋಮ ಕಲಶಪೂಜೆ, ಬೆಳಿಗ್ಗೆ 9.02ರ ಮಿಥುನ ಲಗ್ನ ಶುಭ ಮುಹೂರ್ತದಲ್ಲಿ ಪ್ರತಿಷ್ಠೆ, ಕಲಶಾಭಿಷೇಕ, ತಂಬಿಲ ಸೇವೆ ನಡೆಯಲಿದೆ. ಸಂಜೆ 5ರಿಂದ ಶ್ರೀ ವಿಷ್ಣುಮೂರ್ತಿ ದೈವದ ಭಂಡಾರ ತೆಗೆಯುವುದು, ಸಂಜೆ 6ರಿಂದ ಕುಣಿತ ಭಜನೆ, ರಾತ್ರಿ 8ಕ್ಕೆ ಅನ್ನಸಂತರ್ಪಣೆ, 10ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಕುಳಿಚ್ಚಾಟ, 11ಕ್ಕೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಜೂನ್ 13ರಂದು ಬೆಳಿಗ್ಗೆ 5.30ರಿಂದ ಶ್ರೀ ವಿಷ್ಣುಮೂರ್ತಿ ದೈವದ ಬಯಲು ಕೋಲ, ಬೆಳಿಗ್ಗೆ 7.30ರಿಂದ ಮಾರಿಕಳ, ಮಧ್ಯಾಹ್ನ 12ರಿಂದ ಗುಳಿಗ ಕೋಲ, ಮಧ್ಯಾಹ್ನ 1ರಿಂದ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.