ಕಡಬ: ಸೋಮವಾರ ರಾತ್ರಿ ಬೀಸಿದ ಗಾಳಿ, ಸಿಡಿಲು ಸಹಿತ ಮಳೆಗೆ ಕಡಬ ತಾಲೂಕಿನ ಕೊಡಿಂಬಾಳ ಗ್ರಾಮದ ಪೆಲತ್ತೊಡಿ ಗಣೇಶ್ ಎಂಬವರ ಮನೆಗೆ ಹಾನಿಯಾಗಿದೆ.

ಮನೆ ಸಮೀಪದ ಮರವೊಂದು ಮನೆ ಮೇಲೆ ಬಿದ್ದಿದೆ. ವಿದ್ಯುತ್ ಕಂಬದ ಮೇಲೂ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಮನೆ ಮೇಲೆ ಬಿದ್ದಿದೆ. ಮನೆ ಬಾಗಶಃ ಹಾನಿಯಾಗಿದೆ.
ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ಪರಿಸರದ ವಿವಿದೆಡೆ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದು ಹಾನಿಯಾಗಿದೆ.